ಅಡ್ಡಹೊಳೆ: ಟೂರಿಸ್ಟ್ ಟೆಂಪೋ ಪಲ್ಟಿ,20 ಮಂದಿಗೆ ಗಾಯ

0
ಕಡಬ ಟೈಮ್ಸ್ ಸುದ್ದಿ ಹಂಚಿರಿ

ಕಡಬ ಟೈಮ್ಸ್, ಅಡ್ಡಹೊಳೆ: ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ 20 ಮಂದಿ ಗಾಯಗೊಂಡ ಘಟನೆ ನೆಲ್ಯಾಡಿ ವಲಯದ ಅಡ್ಡಹೊಳೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ‌.

ಪುತ್ತೂರಿನಲ್ಲಿ ನಡೆಯಲಿದ್ದ ಮದುವೆಗೆಂದು ಸಕಲೇಶಪುರದಿಂದ ಹೊರಟಿದ್ದ ಮಿನಿಬಸ್ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬಸ್ ನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


ಕಡಬ ಟೈಮ್ಸ್ ಸುದ್ದಿ ಹಂಚಿರಿ